Saturday 27 October 2012

ವಿಶ್ವೇಶ್ವರ ಭಟ್ ರವರ ನುಡಿ ಮುತ್ತುಗಳು



ನೀವು ಸೈಟು, ಮನೆ ಕೊಡದಿರಬಹುದು. ಆದರೆ ಒಂದು ಪುಟ್ಟ ಕೈಗಡಿಯಾರ, ಪುಸ್ತಕ, ಪೆನ್ನು ಕೊಡದಿರುವಷ್ಟು ಯಾರೂ ಬಡವರಲ್ಲ. ಆಗಾಗ ಗಿಫ್ಟಗಳನ್ನು ಕೊಡುತ್ತೀರಿ.
* ನಿಮ್ಮ ಜೊತೆಗೆ ಸದಾ ಒಂದು ಪುಸ್ತಕವನ್ನಿಟ್ಟುಕೊಳ್ಳಿ. ಎಂದಿಗೂ ನೀವು ಏಕಾಂಗಿ ಎಂದೆನಿಸುವುದಿಲ್ಲ. ಬೋರು ನಿಮ್ಮ ಸನಿಹ ಸುಳಿಯುವುದಿಲ್ಲ.
* ನೀವು ಎಷ್ಟು ದಿನ ಬದುಕಿರುತ್ತೀರೋ, ಏನಾದರೂ ಹೊಸತನ್ನು ಕಲಿಯುತ್ತಿರಿ. ನೂರು ವರ್ಷ ಬಾಳಿದರೂ ಅದೆಷ್ಟು ಕಡಿಮೆ ವರ್ಷ ಬದುಕಿನೆಂದು ನಿಮಗನಿಸುತ್ತದೆ.
* ಸಾಧ್ಯವಾದರೆ ನಿಮ್ಮ ಚಪ್ಪಲಿ, ಬೂಟು ತೆಗೆದಿಟ್ಟು ಹಸಿರು ಹುಲ್ಲಿನ ಮೇಲೆ ನಡೆಯಿರಿ. ಸ್ವಲ್ಪ ದೂರ ನಡೆಯುತ್ತಿರುವಂತೆ ನಿಮಗೆ ಹಿತವೆನಿಸುತ್ತದೆ. ಈ ಪುಟ್ಟ ಹುಲ್ಲಿನ ಗಿಡಗಳನ್ನು ನಾನು ಸಾಯಿಸುತ್ತಿದ್ದೇನಲ್ಲ ಎಂದು ನಿಮಗೆ ಬೇಸರವಾಗುತ್ತದೆ. ಈ ಬೇಸರವೇ ನಿಜವಾದ ಕಾಳಜಿ.
* ಹೂಗಳು ಗಿಡದಲ್ಲಿದ್ದರೆ ಚೆಂದ. ಅವನ್ನು ಕೊಯ್ದ ಬಳಿಕ ಗಿಡದ ಸೌಂದರ್ಯ ಕುಗ್ಗುತ್ತದೆ. ಹೂವುಗಳು ಬಾಡುತ್ತವೆ. ಪ್ರಕೃತಿಯ ಸಣ್ಣ ಸಣ್ಣ ವಿಚಿತ್ರಗಳು ನಮ್ಮಲ್ಲಿ ಬೆರಗನ್ನುಂಟು ಮಾಡಬಲ್ಲವು.

No comments:

Post a Comment